Thursday, September 17, 2026

BDA Apartments

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ BDA JK_Adv BDA Adv
Home Crime ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ

ಬೆಂಗಳೂರು, ಆಗಸ್ಟ್, 6,2024(www.justkannada.in): ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿ ಬಳಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಂದಿತಾ ಕೆ ಶೆಟ್ಟಿ ವಂಚನೆಗೊಳಗಾದ ಯುವತಿ. ಸುರೇಶ್ ಕುಮಾರ್ ಎಂಬತನೇ ವಂಚನೆ ಮಾಡಿರುವ ಆರೋಪಿ. ಹಂಟರ್​ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ  ನಂದಿತಾ ಅವರ ಬಳಿ ಸುರೇಶ್ ಕುಮಾರ್ 1.71 ಲಕ್ಷ ರೂ. ಹಣವನ್ನ ಪಡೆದು ವಂಚಿಸಿದ್ದಾನೆ ಎನ್ನಲಾಗಿದೆ. ಈ  ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ನಂದಿತಾ ಅವರು ಸಿನಿಮಾದಲ್ಲಿ ನಟಿಸಲು ಅವಕಾಶಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಇನ್ಸ್ಟಾಗ್ರಾಮ್​ನಲ್ಲಿ ಮೂವಿ ಆಯಡ್ ಲಿಂಕ್ ಮೂಲಕ ಸುರೇಶ್ ಕುಮಾರ್ ಎಂಬಾತನ ಪರಿಚಯವಾಗಿದೆ. ತಾನು ಹಂಟರ್ ಮೂವಿ ಕಾಸ್ಟಿಂಗ್ ಡೈರೆಕ್ಟರ್ ಎಂದು ವಂಚಕ ಸುರೇಶ್ ಪರಿಚಯ ಮಾಡಿಕೊಂಡಿದ್ದಾನೆ.

ಬಳಿಕ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಹಂತ ಹಂತವಾಗಿ 1.71 ಲಕ್ಷ ಪಡೆದಿದ್ದಾನೆ. ಆರ್ಟಿಸ್ಟ್ ಕಾರ್ಡ್, ಅಗ್ರಿಮೆಂಟ್ ಸ್ಟಾಂಪ್ ಡ್ಯೂಟಿ, ವಿದೇಶದಲ್ಲಿ ಶೂಟಿಂಗ್ ಇರುತ್ತೆ ಪಾಸ್ ಪೋರ್ಟ್, ಟಿಕೆಟ್ ಚಾರ್ಜ್ ಅಂತ ಹಣ ಪಡೆದು ವಂಚಿಸಿದ್ದಾನೆ ಎನ್ನಲಾಗಿದೆ.

ವಂಚಕನ ಮಾತು ನಂಬಿ ಹಂತ ಹಂತವಾಗಿ ಯುವತಿ ನಂದಿತಾ ಆನ್ ಲೈನ್ ಮೂಲಕ ಹಣ ಪಾವತಿಸಿದ್ದು, ಅನುಮಾನ ಬಂದು ಕ್ರಾಸ್ ಚೆಕ್ ಮಾಡಿದಾಗ ವಂಚನೆ ಮಾಡಿರುವುದು ಗೊತ್ತಾಗಿದೆ.

Key words:  young woman, cheat, chance, movie