ಬೈಕ್​ ಗೆ ಟಿಪ್ಪರ್​ ಡಿಕ್ಕಿಯಾಗಿ  ಓರ್ವ ಯುವತಿ ಸಾವು: ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ.

ಬೆಂಗಳೂರು,ಜನವರಿ,21,2023(www.justkannada.in): ಬೈಕ್​ ಗೆ ಟಿಪ್ಪರ್​ ಡಿಕ್ಕಿಯಾಗಿ ಓರ್ವ ಯುವತಿ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್​ ರಸ್ತೆ ಬಳಿ ಈ ಘಟನೆ ನಡೆದಿದೆ. ಸರಿತಾ (21) ಮೃತಪಟ್ಟ ವಿದ್ಯಾರ್ಥಿನಿ. ಇನ್ನೂಬ್ಬ ಯುವತಿ ಅನಿತಾ (20) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಡಿಗ್ರಿ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಓದುತ್ತಿದ್ದರು.

ಇಬ್ಬರು ಒಟ್ಟಿಗೆ ಬೈಕ್​ ನಲ್ಲಿ ತೆರಳುತ್ತಿದ್ದಾಗ ಟಿಪ್ಪರ್ ಡಿಕ್ಕಿಯಾಗಿದ್ದು,  ಬಳಿಕ 10 ಮೀಟರ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: young woman- died – tipper- collided – bike-bangalore