ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ಆರೋಪ: ಆರೋಪಿ ಬಂಧನ.

ಬೆಂಗಳೂರು,ಸೆಪ್ಟಂಬರ್,22,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಮೂಲದ ದೇವರಾಜ್  ಬಂಧಿತ ಕ್ಯಾಬ್ ಚಾಲಕ. ಘಟನೆ ನಡೆದ 24ಗಂಟೆಯೊಳಗೆ ಜೀವನ್‌ ಭೀಮಾನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.  ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೋಗುವ ವೇಳೆ ಘಟನೆ ಸಂಭವಿಸಿದೆ. ಪಾರ್ಟಿ ಮುಗಿದ ಮೇಲೆ ಯುವತಿ ಮಲ್ಲೇಶ್‌ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಈ ವೇಳೆ ಕ್ಯಾಬ್ ಚಾಲಕ ಆಕೆಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಯುವತಿ ದೂರು ನೀಡಿದ್ದಳು.

ಈ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಮುಂಜಾಗಿ  3 ರಿಂದ 4 ಗಂಟೆ ವೇಳೆಗೆ ಘಟನೆ ನಡೆದಿದ್ದು, ಯುವತಿ ದೂರು ನೀಡಿದ್ದಳು.  ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನ ಬಂಧಿಸಲಾಗಿದೆ ಎಂದಿದ್ದಾರೆ.

Key words: Young woman- rape – cab driver- Bangalore-arrest