ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ.

ಬೆಂಗಳೂರು, ನವೆಂಬರ್,22,2023(www.justkannada.in):   ಮೆಟ್ರೋ ರೈಲಿನಲ್ಲಿ  ಕಿಡಿಗೇಡಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ನವೆಂಬರ್ 20 ರಂದು ಬೆಳಗ್ಗೆ 8.30ರ  ವೇಳೆ ಗೆ ಮೆಜೆಸ್ಟಿಕ್ ಮೆಟ್ರೋದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಂದು ಯುವತಿ ಮೆಟ್ರೋದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದು,  ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ವ್ಯಕ್ತಿಯೊಬ್ಬ  ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಈ ವೇಳೆ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ಬರೆದು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ Reddit ನಲ್ಲಿ ವಿಚಾರ ಬಹಿರಂಗ ಪಡಿಸಿದ್ದಾರೆ. ಹಾಗೂ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Key words: young woman – sexually harassed – metro train.