Saturday, August 15, 2026

BDA Apartments

Home Front Page ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಕೇಸ್ : ಆರು ಜನರ ವಿರುದ್ಧ ಪ್ರಕರಣ ದಾಖಲು.

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಕೇಸ್ : ಆರು ಜನರ ವಿರುದ್ಧ ಪ್ರಕರಣ ದಾಖಲು.

ಮೈಸೂರು,ಜುಲೈ,10,2023(www.justkannada.in): ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರಸೀಪುರ ಪೋಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ತಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್  ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿಗಳನ್ನು ಪತ್ತೆ ಹಚ್ಚಲು ಪೋಲೀಸರು ಬಲೆ ಬೀಸಿದ್ದಾರೆ  ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ಮೃತದೇಹ ರವಾನೆಯಾಗಿದೆ.

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳಿಂದ ಸ್ವಯಂ ಪ್ರೇರಿತ ನರಸೀಪುರ ಬಂದ್ ಗೆ ಕರೆ ನೀಡಲಾಗಿದೆ. ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುತ್ತಿದ್ದು, ನರಸೀಪುರ ಪಟ್ಟಣದಲ್ಲಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದೆ. ಅಹಿತಕರ ಘಟನೆ ಜರುಗದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ.  ಮೃತ ವ್ಯಕ್ತಿ ವೇಣುಗೋಪಾಲ್ ಮನೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Key words: youth- brigade -activist Murder -case –registered- against- six people.