ಮೈಸೂರು,ಜುಲೈ,11,2023(www.justkannada.in): ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.![]()
ಅನಿಲ್, ಶಂಕರ್, ಮಂಜು ಹ್ಯಾರಿಸ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎ1 ಮಣಿಕಂಠ ಅಲಿಯಾಸ್ ಕೊಳೆ ಮಣಿ ಮತ್ತು ಎ2 ಸಂದೇಶ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಇದೀಗ ನಾಲ್ವರನ್ನ ಬಂಧಿಸಲಾಗಿದ್ದು ಈ ಮೂಲಕ 6 ಮಂದಿ ಆರೋಪಿಗಳನ್ನ ಬಂಧಿಸಿದಂತಾಗಿದೆ.
ಶನಿವಾರ ತಿ.ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ನಂತರ ಭಾನುವಾರವೂ ಸಹ ಗಲಾಟೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಮಾಡಲಾಗಿತ್ತು.
Key words: Youth Brigade –worker- murder- case- Four – accused -arrested.







