ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್: ಮತ್ತೆ ನಾಲ್ವರು ಆರೋಪಿಗಳ ಬಂಧನ.

ಮೈಸೂರು,ಜುಲೈ,11,2023(www.justkannada.in):  ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ಅನಿಲ್, ಶಂಕರ್, ಮಂಜು ಹ್ಯಾರಿಸ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎ1 ಮಣಿಕಂಠ ಅಲಿಯಾಸ್ ಕೊಳೆ ಮಣಿ ಮತ್ತು ಎ2 ಸಂದೇಶ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಇದೀಗ ನಾಲ್ವರನ್ನ ಬಂಧಿಸಲಾಗಿದ್ದು ಈ ಮೂಲಕ 6 ಮಂದಿ ಆರೋಪಿಗಳನ್ನ ಬಂಧಿಸಿದಂತಾಗಿದೆ.

ಶನಿವಾರ ತಿ.ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ನಂತರ ಭಾನುವಾರವೂ ಸಹ ಗಲಾಟೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಮಾಡಲಾಗಿತ್ತು.

Key words: Youth Brigade –worker- murder- case- Four – accused -arrested.