ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್’ನಿಂದ ಪ್ರತಿಭಟನೆ

ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸೈಕಲ್ ಜಾಥಾ ನಡೆಸಿದರು.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಟ್ರಿನಿಟಿ ಸರ್ಕಲ್ ನಿಂದ ಬ್ರಿಗೇಡ್ ರೋಡ್ ವರೆಗೆ ಸೈಕಲ್ ಜಾಥಾ ನಡೆಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗಿದೆ. ಬೆಲೆ ಏರಿಕೆಗೆ ತಾಲಿಬಾನಿಗಳು ಕಾರಣ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದರು.
ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ. ಬೆಲೆ ಏರಿಕೆ ನಿಯಂತ್ರಿಸದಿದ್ದರೆ ಯುವ ಕಾಂಗ್ರೆಸ್ ನಿಂದ ಇನ್ನೂ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಬಿ.ವಿ. ಶ್ರೀನಿವಾಸ್ ಎಚ್ಚರಿಸಿದರು.

key words: Youth Congress protest in Bangalore over price hike