ಹೆಚ್ಚುವರಿ ಅಕ್ಕಿ ನೀಡದ ಕೇಂದ್ರದ ನಡೆಗೆ ಖಂಡನೆ: ರಾಜ್ಯ ಬಿಜೆಪಿ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ..

ಬೆಂಗಳೂರು,ಜುಲೈ,5,2023(www.justkannada.in):  ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆ , ಈ ನಡೆಯನ್ನ ಖಂಡಿಸಿ ಇಂದು ರಾಜ್ಯದ ಹಲವು ಕಡೆಗಳಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ನಡುವೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಎದುರು ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ತಲೆ ಮೇಲೆ ಅಕ್ಕಿಚೀಲ  ಹೊತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಬೇರೆಡೆಗೆ ರವಾನಿಸಿದರು.

ಇನ್ನೂ ಮೈಸೂರು, ಶಿವಮೊಗ್ಗ ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ರಾಜ್ಯಯುವಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

Key words:  Youth Congress -protests –bangalore-against- Central Government