Sunday, September 20, 2026

BDA Apartments

ದೇಶದ 80 ರಷ್ಟು ಯುವಕರು ಮೋದಿ ಮೋದಿ ಎನ್ನುತ್ತಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋ...
Home Front Page ದೇಶದ 80 ರಷ್ಟು ಯುವಕರು ಮೋದಿ ಮೋದಿ ಎನ್ನುತ್ತಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು.

ದೇಶದ 80 ರಷ್ಟು ಯುವಕರು ಮೋದಿ ಮೋದಿ ಎನ್ನುತ್ತಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು.

ಹುಬ್ಬಳ್ಳಿ,ಮಾರ್ಚ್,26,2024, (www.justkannada.in): ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೇಶದ 89 ರಷ್ಟು ಯುವಕರು ಮೋದಿ ಮೋದಿ ಅನ್ನುತ್ತಾರೆ  ಇವರು ಮೋದಿ ಅವರನ್ನ ಎಷ್ಟು  ದ್ವೇಷ ಮಾಡುತ್ತಾರೋ ಅಷ್ಟು ಜನರು ಮೋದಿಯನ್ನ ಪ್ರೀತಿಸುತ್ತಾರೆ.  ಕಾಂಗ್ರೆಸ್ ನವರದ್ದು ಯಾವಾಗಲೂ ಹೊಡಿಬಡಿ ಸಂಸ್ಕೃತಿ ಎಂದು ಕಿಡಿಕಾರಿದರು.ದೇಶದ 80 ರಷ್ಟು ಯುವಕರು ಮೋದಿ ಮೋದಿ ಎನ್ನುತ್ತಾರೆ joshi

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಚಿವ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ?  ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂದಿದ್ದರು.

Key words: youth, Modi, Prahlad Joshi