ಮತ್ತೆ ಜೆಡಿಎಸ್ ಗೆ ಸೇರ್ಪಡೆಯಾದ ವೈಎಸ್ ವಿ ದತ್ತಾ: ಕಡೂರು ಅಭ್ಯರ್ಥಿಯಾಗಿ ಸ್ಪರ್ಧೆ.

ಬೆಂಗಳೂರು,ಏಪ್ರಿಲ್,13,2023(www.justkannada.in):  ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ ವಿ ದತ್ತಾ ಅವರು,  ಕಾಂಗ್ರೆಸ್ ಟಿಕೆಟ್  ಕೈತಪ್ಪಿದ ಹಿನ್ನೆಲೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ನಿಂದಲೇ ಕಡೂರು ಕ್ಷೇತ್ರದಲ್ಲಿ ವೈಎಸ್ ವಿ ದತ್ತಾ ಅವರು ಸ್ಪರ್ಧಿಸಲಿದ್ದಾರೆ. ಈ ಕುರಿತು ಮಾಜಿ ಸಚಿವ ಹೆಚ್.ಡಿ ರೇವಣ್ಣ ಘೋಷಣೆ ಮಾಡಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ  ಯಗಟಿ ಗ್ರಾಮದಲ್ಲಿನ ವೈಎಸ್ ವಿ ದತ್ತಾ ಅವರ ನಿವಾಸಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ  ಭೇಟಿ ನೀಡಿ ಸಭೆ ನಡೆಸಿದರು.

ಸಭೆಯಲ್ಲಿ ವೈಎಸ್ ವಿ ದತ್ತಾ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದು ಜೆಡಿಎಸ್  ಅಭ್ಯರ್ಥಿಯಾಗಿ ವೈಎಸ್ ವಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೆಚ್.ಡಿ ರೇವಣ್ಣ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ವೈಎಸ್ ವಿ ದತ್ತಾ,  ಹೆಚ್.ಡಿ ದೇವೇಗೌಡರು ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದಿದ್ದಾರೆ. ಹಾಗಾಗಿ ದೇವೇಗೌಡರ ಮಾತಿಗೆ ಬೆಲೆ ಕೊಡುತ್ತೇನೆ ಎಂದಿದ್ದಾರೆ.  ಈ ಮೂಲಕ ಕಡೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ವೈಎಸ್ ವಿ ದತ್ತಾರಿಗೆ ಫಿಕ್ಸ್ ಆಗಿದೆ.

Key words: YSV Datta- joined -JDS –again-  Compete-Kaduru