ಮಾ.20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರ್ಯಾಲಿ: ಯುವಕರಿಗೆ ಯೋಜನೆ ಘೋಷಣೆ- ರಣದೀಪ್ ಸಿಂಗ್ ಸುರ್ಜೇವಾಲ.

ಬೆಳಗಾವಿ,ಮಾರ್ಚ್,16,2023(www.justkannada.in): ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರ್ಯಾಲಿ ನಡೆಸುತ್ತೇವೆ. ಅಂದು ಯುವಕರಿಗೆ ಯೋಜನೆ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಮಾರ್ಚ್ 20ರ ಯುವಕ್ರಾಂತಿ ರ್ಯಾಲಿಯನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ.  ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನಖರ್ಗೆ ಪಾಲ್ಗೊಳ್ಳಲಿದ್ದಾರೆ. ಬೊಮ್ಮಯಿ ಸರ್ಕಾರ ಯುವಕರ ಭವಿಷ್ಯವನ್ನ ಹಾಳು ಮಾಡಿದೆ. ಪಿಎಸ್ ಐ ಹುದ್ದೆ ಸೇರಿದಂತೆ ಸರ್ಕಾರಿ ಹುದ್ದೆಯನ್ನ ಮಾರಾಟ ಮಾಡಿದ್ದಾರೆ. ಕೈಗಾರಿಕೋದ್ಯಮಗಳು ಅನ್ಯರಾಜ್ಯಗಳ ಪಾಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದು . ಮೋದಿ ರೋಡ್ ಶೋ ಮಾಡಿದ ದಿನವೇ ಬೆಲೆ ಏರಿಕೆ ಆಗಿದೆ. ಹೀಗಾಗಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವ್ಯಂಗ್ಯವಾಡಿದರು.

Key words: Yuva Kranti -rally – Belgaum – March 20- Randeep Singh Surjewala.