ಮೈಸೂರು ಯುವರಾಜ ಕಾಲೇಜು:  ಪದವಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ…

ಮೈಸೂರು,ಆ,13,2020(www.justkannada.in):   ಮೈಸೂರು ಯುವರಾಜ ಕಾಲೇಜಿನಲ್ಲಿ  ಪದವಿಗೆ  ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನ ವಿಸ್ತರಿಸಲಾಗಿದೆ.

ಈ ಕುರಿತು ಜಸ್ಟ್ ಕನ್ನಡ ಡಾಟ್ ಇನ್ ಜತೆ ಮಾತನಾಡಿ ಮಾಹಿತಿ ನೀಡಿದ ಮೈಸೂರು ಯುವರಾಜ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ದೇವರಾಜಗೌಡ, ಕಾಲೇಜಿನಲ್ಲಿ ಪದವಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕವನ್ನ ನಾಳೆ ಸಂಜೆ 5 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ.  ಬಿಎಸ್ ಸಿ, ಬಿಸಿಎ ಮತ್ತು ಬಿಬಿಎ ಪದವಿಗಳಿಗೆ ಅರ್ಹ ವಿದ್ಯಾರ್ಥಿಗಳು ನಾಳೆ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.yuvaraja-college-mysore-application-submission-date-extension

ಅರ್ಜಿ ಸಲ್ಲಿಕೆಯ ದಿನಾಂಕ  ಅಗಸ್ಟ್ 11ಕ್ಕೆ ಕೊನೆಯಾಗಿತ್ತು. ಆದರೆ ವಿದ್ಯಾರ್ಥಿಗಳ ದೃಷ್ಠಿಯಿಂದ ಪದವಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕವನ್ನ ನಾಳೆ ಸಂಜೆ 5 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಅರ್ಜಿಯ ಶುಲ್ಕ 200 ರೂ ಆಗಿದೆ ಎಂದು ತಿಳಿಸಿದ್ದಾರೆ.

Key words: Yuvaraja College- Mysore- Application –submission- date extension