Wednesday, July 29, 2026

BDA Apartments

Home Front Page ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ಝಡ್ ಶ್ರೇಣಿ ಭದ್ರತೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ಝಡ್ ಶ್ರೇಣಿ ಭದ್ರತೆ.

ಬೆಂಗಳೂರು, ಅಕ್ಟೋಬರ್ 26,2023(www.justkannada.in): ಮಾಜಿ ಸಿಎಂ  ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಸರ್ಕಾರ ಝೆಡ್ ಶ್ರೇಣಿ ಭದ್ರತೆ  ನೀಡಿದೆ.

ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ  ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಕೇಂದ್ರ ಗೃಹ ಸಚಿವಾಲಯ ಈ ಭದ್ರತೆ ಒದಗಿಸಿದೆ ಎನ್ನಲಾಗಿದೆ. ಗೃಹ ಸಚಿವಾಲಯ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರ ಉನ್ನತ ಶ್ರೇಣಿಯ ಭದ್ರತೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Key words: Z rank -security – former CM- BS Yeddyurappa