ಬೆಂಗಳೂರು,ಜೂನ್,5,2026 (www.justkannada.in): ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು.
ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. ಷಡ್ಯಂತ್ರ ಮಾಡಿ ಸಚಿವ ಸ್ಥಾನ ಕೈತಪ್ಪಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲೀಂ ಸಮುದಾಯ ಮತ ಹಾಕಲ್ಲ. 2ನೇ ಪಟ್ಟಿಯನ್ನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿಜಯನಗರದಲ್ಲೂ ಪ್ರತಿಭಟನೆ ನಡೆದಿದೆ. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Demand, ministerial post, Zameer Ahmed Khan, Protest






