Sunday, August 16, 2026

BDA Apartments

Home Front Page ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ-ಸಿಎಂ ಬಸವರಾಜ ಬೊಮ್ಮಾಯಿ.

ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ-ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಡಿಸೆಂಬರ್,17,2022(www.justkannada.in): ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಯಂತೆ ಶೇ. 50 ರಷ್ಟು ಸಬ್ಸಿಡಿ ನೀಡಲು ನಿರ್ಧಾರ ಮಾಡಲಾಗಿದೆ.  ಪವರ್ ಲೂಮ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.

ಮನೆಯಲ್ಲಿ ಕೆಲಸ ಮಾಡುವ ನೇಕಾರರು ಗುಡಿ ಕೈಗಾರಿಕೆ ವ್ಯಾಪ್ತಿಗೆ ಸೇರಿಸಲಾಗುತ್ತದೆ.  ನೇಕಾರರು ಉತ್ಪಾದಿಸುವ ಬಟ್ಟೆ ಖರೀದಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತದೆ. ಮುಂದಿನ ಬಜೆಟ್ ನಲ್ಲಿ ಅನುದಾನ ಘೋಷಣೆ  ಮಾಡುತ್ತೇವೆ. ನೇಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Zero –interest- loan – 2 lakh – weavers- CM -Basavaraja Bommai