Saturday, August 15, 2026

BDA Apartments

Home Front Page ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ : 50ನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್...

ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ : 50ನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ.

ಮುಂಬೈ,ನವೆಂಬರ್,15,2023(wwwjustkannada.in):  ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದು ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ.

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದರು. ಈ ಮೂಲಕ 49 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.

ಪ್ರಸ್ತುತ  ವಿರಾಟ್ ಕೊಹ್ಲಿ  113 ಬಾಲ್ ಗೆ 117 ರನ್ ಗಳಿಸಿ ಔಟ್ ಆಗಿದ್ದಾರೆ. ಇಂಡಿಯಾ 43 ಓವರ್ ಗಳಲ್ಲಿ 214 ರನ್ ಬಾರಿಸಿದೆ.

Key words:  History – ODI –Cricket- Virat Kohli -broke -Sachin’s- record