Tuesday, August 18, 2026

BDA Apartments

Home Front Page ಸಿದ್ಧು-ಡಿಕೆಶಿ ಮಧ್ಯೆ ಸಿಎಂ ಕುರ್ಚಿಗಾಗಿ ಕಚ್ಚಾಟ: ಕಾಂಗ್ರೆಸ್ ನಿರ್ನಾಮ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಸಿದ್ಧು-ಡಿಕೆಶಿ ಮಧ್ಯೆ ಸಿಎಂ ಕುರ್ಚಿಗಾಗಿ ಕಚ್ಚಾಟ: ಕಾಂಗ್ರೆಸ್ ನಿರ್ನಾಮ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಧಾರವಾಡ,ನವೆಂಬರ್,20,2021(www.justkannada.in):  ಕಾಂಗ್ರೆಸ್ ನಲ್ಲಿ ಒಡಕು ಇದೆ. ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಜಗದೀಶ್ ಶೆಟ್ಟರ್. 2023ರಲ್ಲಿ ಅಧಿಕಾರಕ್ಕೆ ಬರುವುದಾಗಿ ಕಾಂಗ್ರೆಸ್  ಕನಸು ಕಾಣುತಿದ್ದಾರೆ. ಒಂದೆರೆಡು ರಾಜ್ಯಗಳನ್ನ ಬಿಟ್ಟರೇ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕಬೇಕಿದೆ. ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಬಣದ ನಡುವೆ ಕಾದಾಟ ನಡೆಯುತ್ತಿದೆ. ಸಿಎಂ ಕುರ್ಚಿಗಾಗಿ ಕಚ್ಚಾಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ರೀತಿ ಆಗಿದೆ. ಡಿಕೆ ಶಿವಕುಮಾರ್ ಸಿದ್ಧರಾಮಯ್ಯ ಕಚ್ಚಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ಜಗದೀಶ್ ಶೆಟ್ಟರ್ ನುಡಿದರು.

Key words: CM chair – siddaramaiah-DK Shivakumar – Congress -exterminated – Former CM -Jagdish Shettar.